ಭೀಕರ ಅಪಘಾತ: ರೈಲು ಹಳಿ ಮೇಲೆ ಬಿದ್ದ ಬಸ್, ನಾಲ್ವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಮೇಲ್ಸೇತುವೆಯಿಂದ ರೈಲು ಹಳಿ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಸೋಮವಾರ ನಸುಕಿನ 2.15ರ ಸುಮಾರಿಗೆ ದೌಸಾ ಜಿಲ್ಲೆಯ ಕಲೆಕ್ಟರೇಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಈ ಬಸ್‌ ಹರಿದ್ವಾರದಿಂದ ಜೈಪುರಕ್ಕೆ ತೆರಳುತ್ತಿತ್ತು. ಅಪಘತಾದಿಂದಾಗಿ ಪ್ರಯಾಣಿಕರಲ್ಲಿ ನಾಲ್ವರು ಸಾವನ್ನಪ್ಪಿದ್ದು, 28 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.

ದೌಸಾ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಕಸ್ವಾ, ಬಸ್ ಅಪಘಾತದ ಸ್ಥಳ ಪರಿಶೀಲನೆ ನಡೆಸಿದರು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಅಪಘಾತದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!