ಕೆಎಸ್‌ಆರ್‌ಟಿಸಿ ಬಸ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಗೆ ಹಿಂಬದಿಯಿಂದ ಮಾರುತಿ ಶಿಫ್ಟ್ ಕಾರು ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ.

ಮೃತರು ಕಾರಿನಲ್ಲಿ ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಬೆಳ್ಳೂರು ಕ್ರಾಸ್ ಬಳಿ ರಸ್ತೆ ಬದಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಬೆಳ್ಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!