ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಮತ್ತು ಬಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಾಯಗೊಂಡಿರುವ ಘಟನೆ ರಾಜಸ್ಥಾನದ ಡುಂಗರಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಚಿವಾಡಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಕಾರು ಡುಂಗರಪುರಕ್ಕೆ ಚಲಿಸುತ್ತಿತ್ತು ಈ ವೇಳೆ ಎದುರಿಗೆ ಬಂದ ಬಸ್‌ಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವನಿಗೆ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸತೀಶ್ ಭಾಯಿ (25), ಅಂಕಿತ್ ನಿನಾಮ (25), ರವಿ (23) ಮತ್ತು ಕೌಶಿಕ್ (21) ಮೃತ ದುರ್ದೈವಿಗಳು.
ಮೃತರೆಲ್ಲರೂ ಗುಜರಾತ್‌ನ ಶಾಮಲಾಜಿ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.