ಲಾರಿಗೆ ಟಾಟಾ ಏಸ್‌ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟಾಟಾ ಏಸ್ ಲಾರಿಗೆ ಭೀಕರವಾಗಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ನಡೆದಿದೆ.

ಇಸ್ಮಾಯಿಲ್ (25), ಚನ್ನಭಸವ(26), ಅಂಬರೀಶ್(20) ಮತ್ತು ರವಿ (21) ಮೃತ ದುರ್ದೈವಿಗಳು. ಓರ್ವನ ಸ್ಥಿತಿ ಗಂಭೀರವಾಗಿದ್ದು, ಮೃತದೇಹಗಳನ್ನ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!