Wednesday, November 29, 2023

Latest Posts

ಕಂದಕಕ್ಕೆ ಉರುಳಿದ ಟ್ರಕ್: ಸ್ಥಳದಲ್ಲೇ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟ್ರಕ್ ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ.

ಶ್ರೀನಗರದಿಂದ ರಾಜಸ್ಥಾನಕ್ಕೆ ತೆರಳುತ್ತಿದ್ದ ಟ್ರಕ್ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಜ್ಜರ್ ಕೋಟ್ಲಿ ಪ್ರದೇಶದಲ್ಲಿ‌ ಸೇತುವೆ ಮೇಲೆ ಚಲಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅದರ ಪರಿಣಾಮ ಟ್ರಕ್ ಕಂದಕಕ್ಕೆ ಉರುಳಿದೆ. ಇದರಿಂದಾಗಿ ಟ್ರಕ್‌ನಲ್ಲಿದ್ದ ನಾಲ್ಕು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಈ ಭೀಕರ ಅಪಘಾತದಲ್ಲಿ ಟ್ರಕ್‌ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!