ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಂಗಳವಾರ ಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಐಷಾರಾಮಿ ಬಸ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಗುಜರಾತ್ನಿಂದ ಮುಂಬೈಗೆ ತೆರಳುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಅದರ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಮಂಗಳವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಈ ಘಟನೆ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.