ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಂಗ್ಲೆಂಡ್ನಲ್ಲಿ ಮೊದಲ ಬಾರಿ ನಡೆಯಲಿರುವ ‘ದ ಹಂಡ್ರೆಡ್’ ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಹರ್ಮನ್ಪ್ರೀತ್ ಕೌರ್ ಸೇರಿದಂತೆ ಭಾರತದ ನಾಲ್ವರು ಆಟಗಾರ್ತಿಯರಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರಾಕ್ಷೇಪಣಾ ಪತ್ರ (ಎನ್ಒಸಿ) ನೀಡಿದೆ.
ಜುಲೈ 21ರಿಂದ ನಡೆಯಲಿರುವ ‘100 ಎಸೆತಗಳ ಟೂರ್ನಿ’ಗೆ ಹರ್ಮನ್ಪ್ರೀತ್ ಜೊತೆಗೆ ಸ್ಮೃತಿ ಮಂದಾನ ಹಾಗೂ ದೀಪ್ತಿ ಶರ್ಮಾ ಅನುಮತಿ ಗಿಟ್ಟಿಸಿದ್ದಾರೆ.
‘ಹರ್ಮನ್ಪ್ರೀತ್, ಮಂದಾನ, ದೀಪ್ತಿ ಹಾಗೂ ಇನ್ನೊಬ್ಬ ಆಟಗಾರ್ತಿಗೆ ಟೂರ್ನಿಯಲ್ಲಿ ಆಡಲು ಎನ್ಒಸಿ ನೀಡಲಾಗಿದೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತ ಮಹಿಳಾ ತಂಡವು ಜೂನ್-ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಆತಿಥೇಯ ತಂಡದ ಎದುರು ಒಂದು ಟೆಸ್ಟ್, ತಲಾ ಮೂರು ಟಿ20 ಹಾಗೂ ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಗಳು ಮುಗಿದ ಬಳಿಕ ‘ಹಂಡ್ರೆಡ್’ ಟೂರ್ನಿಯಲ್ಲಿ ಆಡಲು ಈ ನಾಲ್ವರು ಆಟಗಾರ್ತಿಯರು ಅಲ್ಲಿಯೇ ಉಳಿದುಕೊಳ್ಳಲಿದ್ದಾರೆ.