ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುಣೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಪುಣೆಯಲ್ಲಿ ಟ್ರಕ್ ಕಂಟೇನರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ರಾತ್ರಿ 9.30ಕ್ಕೆ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನ, ನವ್ಲೆ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ಬ್ರೇಕ್ ವೈಫಲ್ಯದಿಂದ ಟ್ರಕ್ ಕಂಟೇನರ್ ನಡುವೆ ಅಪಘಾತ ಉಂಟಾಗಿದ್ದು,, ಮುಂದೆ ಸಾಗಿ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಬಳಿಕ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪುಣೆ ಮಹಾನಗರ ಪಾಲಿಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಬೆಂಕಿ ಹೊತ್ತಿಕೊಂಡ ಟ್ರಕ್‌ನಿಂದ ಮೃತ ದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು.
ಲಾರಿಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಲಾರಿಯಿಂದ ಹಾರಿ ಪರಾರಿಯಾಗಿದ್ದಾರೆ. ಅಪಘಾತದಲ್ಲಿ ಅವರಿಗೂ ಗಾಯಗಳಾಗಿವೆ.