September 11, 2026
Friday, September 11, 2026
spot_img

ಮಿರ್ಜಾಪುರದಲ್ಲಿ ರೈಲ್ವೆ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ: ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. 

ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ರೈಲು ಹಳಿ ದಾಟುವಾಗ ನಾಲ್ವರು ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಮೃತರು ಕಾರ್ತಿಕ ಪೂರ್ಣಿಮೆಯಂದು ಗಂಗಾ ಸ್ನಾನಕ್ಕೆ ಹೋಗುತ್ತಿದ್ದ ಭಕ್ತರಾಗಿದ್ದು, ಘಟನೆಯ ಸಮಯದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದರು. ಬೆಳಗ್ಗೆ 9:30 ಕ್ಕೆ ನೇತಾಜಿ ಎಕ್ಸ್‌ಪ್ರೆಸ್ (12311) ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರು ಪ್ಲಾಟ್‌ಫಾರ್ಮ್ ಬದಿಗೆ ಬದಲಾಗಿ ರೈಲಿನ ಎದುರು ಭಾಗದಲ್ಲಿ ಇಳಿದಿದ್ದಾರೆ, ಅಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳಿಗೆ ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಾ ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !