Wednesday, June 7, 2023

Latest Posts

ಮಾಲ್‌ವೊಂದರಲ್ಲಿ ಗುಂಡಿನ ದಾಳಿ: ನಾಲ್ವರು ಸಾವು, ಒಂಬತ್ತು ಮಂದಿಗೆ ತೀವ್ರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟೆಕ್ಸಾಸ್‌ನ ಅಲೆನ್‌ನಲ್ಲಿರುವ ಅಲೆನ್ ಪ್ರೀಮಿಯಂ ಔಟ್‌ಲೆಟ್ಸ್ ಮಾಲ್‌ನಲ್ಲಿ ಶನಿವಾರ ಗುಂಡಿನ ದಾಳಿ ನಡೆಸಲಾಗಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಜನರು ಶಾಪಿಂಗ್ ಸೆಂಟರ್‌ನ ಮುಂದೆ ಓಡುತ್ತಿರುವುದನ್ನು ತೋರಿಸಿದೆ. ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನು ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ದಾಳಿಕೋರನನ್ನು ಗುಂಡಿಕ್ಕಿ ಕೊಂದಿರುವುದಾಗಿ ವರದಿಯಾಗಿದೆ. ಅಮೆರಿಕದಲ್ಲಿ ಶೂಟಿಂಗ್ ಘಟನೆಗಳು ಸಾಮಾನ್ಯವಾಗಿದೆ. ಅಲ್ಲಿನ ಪೊಲೀಸರು ಅನಾಹುತಗಳನ್ನು ತಡೆಯಲು ಹೊಸ ಹೊಸ ಯೋಜನೆಗಳನ್ನು ತರುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!