ಕ್ರೈಸ್ತರ ಪ್ರಾರ್ಥನಾ ಮಂದಿರದಲ್ಲಿ ಸ್ಫೋಟ: ನಾಲ್ಕು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕ್ಯಾಥೊಲಿಕ್ ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಜನ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಫಿಲಿಪಿನ್ಸ್‌ ನಲ್ಲಿ ನಡೆದಿದೆ.

ಜಿಮ್ನಾಷಿಯಮ್‌ನಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಪ್ರಾರ್ಥನಾ ಸಭೆಯಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಇದೊಂದು ಮುಸ್ಲಿಂ ಭಯೋತ್ಪಾದಕರ ಕೃತ್ಯ ಎಂದು ಅಲ್ಲಿನ ಪೊಲೀಸರು ಹೇಳಿದ್ದು, ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!