July 1, 2026
Wednesday, July 1, 2026
spot_img

ಬೆಂಗಳೂರು-ಮೈಸೂರು ಹೈವೇಯಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್‌(45), ಸಕೀರ್ (27) ಎಂದು ಗುರುತಿಸಲಾಗಿದೆ. ಕೇರಳದ ಮೂಲದ ಟ್ರಾವೆಲ್‌ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ಬರುತ್ತಿತ್ತು.

ಈ ವೇಳೆ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನಿಗೆ ನಿದ್ದೆ ಬರುತ್ತಿದ್ದರೂ ರೆಸ್ಟ್‌ ಮಾಡದೇ ಗಾಡಿ ಓಡಿಸಿದ್ದಾರೆ. ಇದರಿಂದಾಗಿ ಅಪಘಾತ ಸಂಭವಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !