SHOCKING | ನೇಪಾಳ ಆಯ್ತು…ಅಮೆರಿಕದಲ್ಲೂ ವಿಮಾನ ಪತನ, ನಾಲ್ವರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೇಪಾಳದ ವಿಮಾನ ಅಪಘಾತದ ಘಟನೆ ಬೆನ್ನಲ್ಲೇ ಮತ್ತೊಂದು ವಿಮಾನ ದುರಂತ ಸಂಭವಿಸಿದೆ. ಅಮೆರಿಕದ ಟೆಕ್ಸಾಸ್‌ನಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿದ್ದು, ಈ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಯೋಕೂಮ್ ಬಳಿ ಅಪಘಾತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಐವರು ಪ್ರಯಾಣಿಕರಿದ್ದು, ಈ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮೃತರನ್ನು ಬಿಲ್ ಗಾರ್ನರ್, ಸ್ಟೀವ್ ಟಕರ್, ಟೈಲರ್ ಪ್ಯಾಟರ್ಸನ್ ಮತ್ತು ಟೈಲರ್ ಸ್ಪ್ರುಂಗರ್ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಪಾಸ್ಟರ್ ಕೆನ್ನನ್ ವಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರೂ ಮೆಂಫಿಸ್ ಉಪನಗರವಾದ ಜರ್ಮನ್‌ಟೌನ್‌ನಲ್ಲಿರುವ ಚರ್ಚ್‌ಗೆ ಸೇರಿದವರು ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಘಟನೆ ಕುರಿತು ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!