ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಡಿಸಿಎಂ ಹಾಗೂ ಲಾರಿ ಪರಸ್ಪರ ಡಿಕ್ಕಿ ಹೊಡೆದಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ. ಆದಿಭಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುರ್ಕಯಾಂಜಲ್ ಚೌಕದಲ್ಲಿ ವೇಗವಾಗಿ ಬಂದ ಲಾರಿಯೊಂದು ಸಿಮೆಂಟ್ ತುಂಬಿಕೊಂಡು ಡಿಸಿಎಂ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಆದಿಭಟ್ಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!