ಟೆಕ್ಸಾಸ್‌ ಶಾಲೆ ಆಯ್ತು, ಇದೀಗ ಸೇಂಟ್ ಫ್ರಾನ್ಸಿಸ್ ಆಸ್ಪತ್ರೆ ಮೇಲೆ ಗುಂಡಿನ ದಾಳಿ, ನಾಲ್ವರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟೆಕ್ಸಾಸ್‌ನ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿ ಘಟನೆ ಮಾಸುವ ಮುನ್ನವೇ ಅಮೆರಿಕಾದಲ್ಲಿ ಮತ್ತೊಂದುದುರಂತ ನಡೆದಿದೆ. ಓಕ್ಲಹೋಮಾದ ತುಲ್ಸಾದಲ್ಲಿರುವ ಸೇಂಟ್ ಫ್ರಾನ್ಸಿಸ್ ಆಸ್ಪತ್ರೆ ಆವರಣದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ನಾಲ್ವರು ನಾಗರೀಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಆಸ್ಪತ್ರೆಯಲ್ಲಿ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ ಮೃತಪಟ್ಟಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದುಷ್ಕರ್ಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಪೊಲೀಸರಿಂದ ಹತ್ಯೆಗೀಡಾದನೋ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತುಲ್ಸಾದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದಾರೆ. ಗುಂಡಿನ ದಾಳಿಯ ಕುರಿತು ಅಮೆರಿಕ ಅಧ್ಯಕ್ಷ ಜೋ ಬಿಡನ್‌ಗೆ ಮಾಹಿತಿ ನೀಡಿರುವುದಾಗಿ ಶ್ವೇತಭವನ ಹೇಳಿಕೆಯಲ್ಲಿ ತಿಳಿಸಿದೆ.

ಯುನೈಟೆಡ್ ಸ್ಟೇಟ್ಸ್ ನಲ್ಲಿ ಸರಣಿ ಗುಂಡಿನ ದಾಳಿಗಳು ಅಲ್ಲಿನ ಜನರನ್ನು ಭಯಭೀತರನ್ನಾಗಿಸಿದೆ. ಕಳೆದ ತಿಂಗಳ 14ರಂದು ನ್ಯೂಯಾರ್ಕ್‌ನ ಬಫಲೋದಲ್ಲಿರುವ ಕಿರಾಣಿ ಅಂಗಡಿಯೊಂದು ಆಫ್ರಿಕನ್ ಅಮೆರಿಕನ್ನರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿತ್ತು. ಗುಂಡಿನ ದಾಳಿಯಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದರು. ಒಂದು ವಾರದ ಹಿಂದೆ, ಟೆಕ್ಸಾಸ್‌ನ ಉವಾಲ್ಡೆಯಲ್ಲಿರುವ ಶಾಲೆಯೊಂದರಲ್ಲಿ ದುಷ್ಕರ್ಮಿಯೊಬ್ಬ AR-15 ನಿಂದ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ 19 ಮಕ್ಕಳು ಸೇರಿದಂತೆ 21 ಜನರು ಸಾವನ್ನಪ್ಪಿದ್ದಾರೆ. ಇದೀಗ ಇಂದು ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!