ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಜೈಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಪಾಲ್ಘಡದಲ್ಲಿ ಗುಂಡಿನ ದಾಳಿ ನಡೆದಿದ್ದು, ರೈಲು ಮುಂಬೈಗೆ ತೆರಳುತ್ತಿತ್ತು. ಈ ವೇಳೆ ರೈಲ್ವೆ ರಕ್ಷಣಾ ಪಡೆಯ ಕಾನ್‌ಸ್ಟೇಬಲ್ ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪ್ರಯಾಣಿಕರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.
ತಕ್ಷಣವೇ ಜಿಆರ್‌ಪಿ ಹಾಗೂ ಆರ್‌ಪಿಎಫ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕಾನ್ಸ್‌ಟೇಬಲ್‌ನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ವಿಷಯಕ್ಕಾಗಿ ಗುಂಡಿನ ದಾಳಿ ನಡೆದಿದೆ ಎಂದು ವಿಚಾರಣೆಯಲ್ಲಿ ತಿಳಿಯಲಿದೆ.