ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಮಹಡಿ ಮಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ಬುಧವಾರ ನಡೆದಿದೆ.
ಆಯೇಶಾ ಮಂಜಿಲ್ ಪ್ರದೇಶದಲ್ಲಿರುವ ಆರ್ಶಿ ಶಾಪಿಂಗ್ ಮಾಲ್‌ನಲ್ಲಿ ಈ ದುರಂತ ಸಂಭವಿಸಿದೆ.
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಾಲ್‌ನ ಕೆಳಗಿನ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಇತರೆ ಮೂರು ಮಹಡಿಗಳಿಗೂ ಆವರಿಸಿತ್ತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ಕೂಡಲೇ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಅವಘಡದಿಂದ ಲಕ್ಷಾಂತರ ಮೌಲ್ಯದ ನಷ್ಟ ಉಂಟಾಗಿದ್ದು, ಜನರು ತೊಂದರೆ ಅನುಭವಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆಯ ಬಳಿಕವಷ್ಟೇ ಹೊರಬೀಳಲಿದೆ.