February 1, 2026
Sunday, February 1, 2026
spot_img

ರೂಮ್‌ನಲ್ಲಿ ನಾಲ್ವರು ಕೂಲಿ ಕಾರ್ಮಿಕರ ಅನುಮಾನಾಸ್ಪದ ರೀತಿಯಲ್ಲಿ ಸಾ*ವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ನಾಲ್ವರು ಕೂಲಿ ಕಾರ್ಮಿಕರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಒಂದೇ ರೂಮ್‌ನಲ್ಲಿ ಮಲಗಿದ್ದ ಸ್ಥಿತಿಯಲ್ಲೇ ನಾಲ್ವರು ಮೃತರಾಗಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಮುತ್ಸಂದ್ರ ಗ್ರಾಮದ ಛೋಟಾಸಾಬ್ ಎಂಬುವರಿಗೆ ಸೇರಿದ ಲೇಬರ್ ಶೆಡ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರು ಅಸ್ಸಾಂ ಮೂಲದವರಾಗಿದ್ದು, ಸಮೀಪದ ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪ್ರತಿದಿನದಂತೆ ಕೆಲಸ ಮುಗಿಸಿ ಶೆಡ್‌ಗೆ ಮರಳಿದ್ದ ಕಾರ್ಮಿಕರು ರಾತ್ರಿ ಮಲಗಿದ್ದು, ಬೆಳಿಗ್ಗೆ ಎಚ್ಚರವಾಗದೇ ಇದ್ದಾಗ ಸ್ಥಳೀಯರಿಗೆ ಅನುಮಾನ ಮೂಡಿದೆ.

ಇದನ್ನೂ ಓದಿ:

ವಿಷಯ ತಿಳಿಯುತ್ತಿದ್ದಂತೆ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಾವಿನ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಪ್ರಾಥಮಿಕವಾಗಿ ಉಸಿರುಗಟ್ಟಿಕೆ, ವಿಷಕಾರಿ ಅನಿಲ ಅಥವಾ ಆಹಾರ ಸೇವನೆಗೆ ಸಂಬಂಧಿಸಿದ ಕಾರಣಗಳ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !