ಕಡಬ ಆಸಿಡ್ ದಾಳಿ ಸಂತ್ರಸ್ತರಿಗೆ ಸರ್ಕಾರದಿಂದ ನಾಲ್ಕು ಲಕ್ಷ ರೂ. ಪರಿಹಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದ ಆಸಿಡ್ ದಾಳಿ ಸಂತ್ರಸ್ತರಿಗೆ ಸರ್ಕಾರದಿಂದ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಚಿಕಿತ್ಸೆ ಪಡೆಯುತ್ತಿರುವ ಮೂವರು ವಿದ್ಯಾರ್ಥಿನಿಯರ ಹಾಸ್ಪಿಟಲ್ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.

ನಾಗಲಕ್ಷ್ಮಿ ಚೌಧರಿ ಅವರು ಸಂತ್ರಸ್ತರನ್ನು ಭೇಟಿ ಮಾಡಿದ್ದು, ಮೂರವಲ್ಲಿ ಒಬ್ಬರಿಗೆ ಶೇ.20ರಷ್ಟು, ಇನ್ನೊಬ್ಬರಿಗೆ ಶೇ,12ರಷ್ಟು ಹಾಗೂ ಮತ್ತೊಬ್ಬರಿಗೆ ಶೇ,10ರಷ್ಟು ಗಾಯಗಳಾಗಿವೆ, ಎರಡು ವಾರಗಳ ಚಿಕಿತ್ಸೆ ನಂತರ ಪ್ಲಾಸ್ಟಿಕ್ ಸರ್ಜರಿ ಮಾಡಬಹುದಾಗಿದೆ.

ಪರೀಕ್ಷೆಯ ಸಮಯದಲ್ಲಿ ಈ ರೀತಿ ಅಟ್ಯಾಕ್ ಆದ ಕಾರಣ ವಿದ್ಯಾರ್ಥಿನಿಯರು ಪರೀಕ್ಷೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ನಾವು ಮತ್ತೆ ಪರೀಕ್ಷೆ ಬರೆಯಬೇಕಾ ಎಂದು ಕೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವರ ಜೊತೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ.

ಸೋಮವಾರ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಕಾಲೇಜಿಗೆ ಆಗಮಿಸಿ ಕಟ್ಟೆ ಮೇಲೆ ಓದುತ್ತಾ ಕುಳಿತಿದ್ದ ವಿದ್ಯಾರ್ಥಿನಿಯರ ಮೇಲೆ ಯುವಕನೊಬ್ಬ ಆಸಿಡ್ ದಾಳಿ ಮಾಡಿದ್ದ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!