Wednesday, June 29, 2022

Latest Posts

ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ: ನಾಲ್ವರು ಮಕ್ಕಳು ಸೇರಿ 11 ಜನರ ದುರ್ಮರಣ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉತ್ತರ ಪ್ರದೇಶದ ಚಿರ್ಗಾಂವ್ ಪ್ರದೇಶದಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದ್ದು, ನಾಲ್ವರು ಮಕ್ಕಳು ಸೇರಿ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಉತ್ತರ ಪ್ರದೇಶದ ಝಾನ್ಸಿಯ ಪೊಲೀಸರು, ದಾರಿಯಲ್ಲಿ ಅಡ್ಡ ಬಂದ ಪ್ರಾಣಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಯತ್ನದಲ್ಲಿ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದರು.
ಮೃತರನ್ನು ಕೃಷ್ಣ (10), ಪರಿ (1), ಅನುಷ್ಕಾ (4) ಅವಿ (2) ಪುಷ್ಪ ದೇವಿ (40), ಮುನ್ನಿ ದೇವಿ (40), ಸುನಿತಾ ಬಾಯಿ (35), ಪೂಜಾ ದೇವಿ (25), ರಜ್ಜೋ ಬಾಯಿ (45), ಪ್ರೇಮಾವತಿ (50) ಮತ್ತು ಕುಸುಮಾ (55) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 6 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಟ್ರ್ಯಾಕ್ಟರ್ ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಎರಾಚ್ ನ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುಃಖ ವ್ಯಕ್ತಪಡಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss