SHOCKING| ಮಿಲಿಟರಿ ಹೆಲಿಕಾಪ್ಟರ್‌ ಪತನ: ನಾಲ್ವರು ಕಣ್ಮರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೇನಾ ಹೆಲಿಕಾಪ್ಟರ್ ಪತನವಾಗಿ ನಾಲ್ವರು ಅದೃಶ್ಯವಾಗಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಆಸ್ಟ್ರೇಲಿಯಾದ ಈಶಾನ್ಯ ಕರಾವಳಿಯಲ್ಲಿ ಸೇನಾ ಕಾರ್ಯಾಚರಣೆ ನಡೆಸುತ್ತಿದ್ದಾಗ ಸೇನಾ ಹೆಲಿಕಾಪ್ಟರ್ ನೀರಿನಲ್ಲಿ ಮುಳುಗಿದೆ. ನಾಲ್ವರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಶನಿವಾರ ಹೇಳಿದ್ದಾರೆ.

ಕ್ವೀನ್ಸ್‌ಲ್ಯಾಂಡ್‌ನ ಹ್ಯಾಮಿಲ್ಟನ್ ದ್ವೀಪದಲ್ಲಿ ಶುಕ್ರವಾರ ಮಧ್ಯರಾತ್ರಿ ಸೇನಾ ಅಭ್ಯಾಸ ನಡೆಸುತ್ತಿದ್ದಾಗ ಹೆಲಿಕಾಪ್ಟರ್ ಪತನಗೊಂಡಿದೆ. ಪರಿಣಾಮವಾಗಿ, ನಾಲ್ವರು ಏರ್ ಸಿಬ್ಬಂದಿ ಕಾಣೆಯಾಗಿದ್ದು, ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ.

ಹೆಲಿಕಾಪ್ಟರ್‌ನಲ್ಲಿ ಜಪಾನ್, ಫ್ರಾನ್ಸ್, ಜರ್ಮನಿ ಮತ್ತು ದಕ್ಷಿಣ ಕೊರಿಯಾದ ಸೈನಿಕರಿದ್ದರು ಎಂದು ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕಾಣೆಯಾದವರಿಗಾಗಿ ಶೋಧ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!