ಅಲ್ಪಾವಧಿ ವೀಸಾ ಬಳಸಿ ರಾಜ್ಯದಲ್ಲಿದ್ದ ನಾಲ್ವರು ಪಾಕ್‌ ಪ್ರಜೆಗಳು ಗಡಿಪಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಲ್ಗಾಮ್‌ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್‌ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ.

ದೀರ್ಘಾವಧಿ ವೀಸಾ ಹೊಂದಿರುವವರ ಗಡಿಪಾರಿಗೆ ಕೇಂದ್ರ ಸೂಚಿಸದ ಕಾರಣ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್‌ ಪ್ರಜೆಗಳು ಇನ್ನೂ ಕರ್ನಾಟಕದಲ್ಲೇ ಇದ್ದಾರೆ.

ವಿವಿಧ ಜಿಲ್ಲೆಗಳಲ್ಲಿ 91 ಮಂದಿ ವಾಸವಾಗಿದ್ದಾರೆ ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. 5 ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ರಾಜ್ಯದಲ್ಲಿದ್ದಾರೆ. ಇವರಿಗೆ ಏ.29ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರವು ವಿನಾಯಿತಿ ನೀಡಿದ್ದು, ಗಡುವಿನೊಳಗೆ ನಿಯಮಾನುಸಾರ ಹೊರ ಕಳುಹಿಸಲಾಗುತ್ತದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!