ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುರುವಾರ ರಾತ್ರಿ ಗ್ಯಾಸ್ ಟ್ಯಾಂಕರ್ ಟ್ರಕ್‌ಗೆ ಡಿಕ್ಕಿ ಹೊಡೆದು ನಾಲ್ವರು ಸಜೀವದಹನವಾಗಿರುವ ಘಟನೆ ಅಜ್ಮೀರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಡಿಕ್ಕಿ ನಂತರ, ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಅನಾಹುತಕ್ಕೆ ಕಾರಣವಾಗಿದೆ.
ಡಿಕ್ಕಿಯ ರಭಸಕ್ಕೆ ಟ್ಯಾಂಕರ್‌ನಲ್ಲಿದ್ದ ಪೆಟ್ರೋಲಿಯಂ ಉತ್ಪನ್ನ ಉಗುಳಿದ್ದರಿಂದ ಆ ಮೂಲಕ ಸಾಗುತ್ತಿದ್ದ ಇನ್ನೆರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅಕ್ಕಪಕ್ಕದ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸಿದ್ದಾರೆ. ಉಪವಿಭಾಗಾಧಿಕಾರಿ ಮೃದುಲ್ ಸಿಂಗ್, ಸದರ್ ಸರ್ಕಲ್ ಇನ್ಸ್‌ಪೆಕ್ಟರ್ ಚೆನಾರಾಮ್ ಬೇಡಾ, ಸರ್ಕಲ್ ಆಫೀಸರ್ ಮಸೂದ ಈಶ್ವರ್ ಸಿಂಗ್ ಯಾದವ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.