ಹೊಸದಿಗಂತ ಡಿಜಿಟಲ್ ಡೆಸ್ಕ್ :
ಟ್ರಕ್ ಮತ್ತು ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ರಾಜಸ್ಥಾನದ ಧೋಲ್‌ಪುರದ ವಿಷ್ಣೋದ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲಾ ಮೃತ ದೇಹಗಳನ್ನು ಶವಾಗಾರದಲ್ಲಿ ಇಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆಗ್ರಾದಿಂದ ಕೈಲಾ ದೇವಿ ದೇವಸ್ಥಾನಕ್ಕೆ ಹೋಗುತ್ತಿರುವ ವೇಳೆ ಈ ಘಟನೆ ಸಂಭವಿಸಿದ್ದು, ಎಲ್ಲಾ ಮೃತರು ಒಂದೇ ಕುಟುಂಬದವರು ಎಂದು ಹೇಳಲಾಗುತ್ತಿದೆ.