ಮಿನಿ ಟ್ರಕ್‌ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ದುರ್ಮರಣ, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಮಿನಿ ಟ್ಕ್ರಕ್‌ ಅಪಘಾತವಾಗಿ ನಾಲ್ವರು ಮೃತಪಟ್ಟ ದಾರುಣ ಘಟನೆ ಮಹಾರಾಷ್ಟ್ರದ ನಾಶಿಕ್​ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ.
ಸುಮಾರು ೩೦ ಜನರಿದ್ದ ಪ್ರಯಾಣಿಕ ಗುಂಪು ದೇವಾಲಯವೊಂದಕ್ಕೆ ಮಿನಿಟ್ರಕ್‌ ನಲ್ಲಿ ತೆರಳಿ ದೇವರ ದರ್ಶನ ಪಡೆದು ವಾಪಸ್‌ ಬರುತ್ತಿದ್ದರು. ಚಾಲಿಸ್‌ಗಾಂವ್-ಮಾಲೆಗಾಂವ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರೆಲ್ಲರೂ ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಚಾಲಿಸ್‌ಗಾಂವ್ ತಾಲೂಕಿನ ಮುಂಡ್‌ಖೇಡಾದವರು ಎಂದು ತಿಳಿದುಬಂದಿದೆ. ಮೃತಪಟ್ಟ ನಾಲ್ವರಲ್ಲಿ ಒಬ್ಬರ ಗುರುತು ಮಾತ್ರ ಮಾತ್ರ ಪತ್ತೆಯಾಗಿದೆ. ಉಳಿದವರ ಹೆಸರು ತಿಳಿದುಬಂದಿಲ್ಲ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳುಗಳಲ್ಲಿ ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!