ಹೊಸದಿಗಂತ ಡಿಜಿಟಲ್ ಡೆಸ್ಕ್
ಶಿವಮೊಗ್ಗದ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಬಳೆಗಾರುನಲ್ಲಿ ಸೋಮವಾರ ಖಾಸಗಿ ಬಸ್ ಮತ್ತು ಓಮ್ನಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಮೃತ ನಾಲ್ವರೂ ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಚನ್ನಗಿರಿಯಿಂದ ಜೋಗ ಜಲಪಾತ ನೋಡಲೆಂದು ಚನ್ನಗಿರಿಯಿಂದ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗದಲ್ಲೇ ಭೀಕರ ಅಪಘಾತ ಸಂಭವಿಸಿ ದುರಂತ ಅಂತ್ಯ ಕಂಡಿದ್ದಾರೆ.
ಮೂವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಸ್ ಚಾಲಕ ಪರಾರಿಯಾಗಿದ್ದಾನೆ.