ನೋಯ್ಡಾ ಹೌಸಿಂಗ್ ಸೊಸೈಟಿ ಕಟ್ಟಡದ ಗೋಡೆ ಕುಸಿದು ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ನೋಯ್ಡಾದಲ್ಲಿ ಹೌಸಿಂಗ್ ಸೊಸೈಟಿಯ ಕಟ್ಟಡವೊಂದರ ಗೋಡೆ ಕುಸಿದಿದೆ.
ಈ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಕಟ್ಟಡದ ಗೋಡೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!