Tuesday, October 28, 2025

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತಕ್ಕೆ ಕರ್ನಾಟಕದ ನಾಲ್ವರು ಸಾವು: ಇಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಧಾರಶಿವ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ಮೃತರನ್ನು ಬೀದರ್ ತಾಲೂಕಿನ ಕಾಶೆಂಪುರ್ (ಪಿ) ಗ್ರಾಮದ ಕಾರು ಚಾಲಕ ರತಿಕಾಂತ ಮಾರುತಿ ಬಸಗೊಂಡ (30) ಸದಾನಂದ ಮಾರುತಿ ಬಸಗೊಂಡ (19) ಶಿವಕುಮಾರ್ ಚಿದಾನಂದ ವಗ್ಗೆ (26) ಸಂತೋಷ ಬಜರಂಗ ಬಸಗೊಂಡ ಎಂದು ಗುರುತಿಸಲಾಗಿದೆ.

ಮೃತರು ವಿಜಯಪುರ ಸಮೀಪದ ಪ್ರಸಿದ್ಧ ದೇವಸ್ಥಾನ ಹುಲಜಂತಿಯ ಮಾಳಿಂಗರಾಯನ ಜಾತ್ರೆಗೆ ಹೋಗಿ ಬರುವಾಗ ಅಪಘಾತ ಸಂಭವಿಸಿದೆ. ಮುರುಮ್ ಠಾಣಾ ವ್ಯಾಪ್ತಿಯ ದಾಳಿಂಬ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿಯೊಂದು ಇದಕ್ಕಎರಡು ಕಾರುಗಳ ನಡುವಿನ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನ ಒಳಗಿದ್ದವರನ್ನು ಜೆಸಿಬಿಯಿಂದ ಹೊರಗೆ ತೆಗೆಯಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಉಮರ್ಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!