Friday, February 3, 2023

Latest Posts

ಜವರಾಯನ ಅಟ್ಟಹಾಸ: ಪ್ರಾಣಕ್ಕೆ ಕುತ್ತು ತಂದ ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರೀ ವೆಡ್ಡಿಂಗ್ ಶೂಟಿಂಗ್‌ಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಮಹಬೂಬಾಬಾದ್‌ಗೆ ತೆರಳುತ್ತಿದ್ದ ವೇಳೆ ಕೋಟಿಲಿಂಗಲ ಬಳಿ ಕಾರು ಮತ್ತು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಇಲ್ಲಂದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಆದರೆ ರಣಧೀರ್ ಎಂಬ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಉತ್ತಮ ಚಿಕಿತ್ಸೆಗಾಗಿ ಅವರನ್ನು ಖಮ್ಮಂ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ನಾಲ್ವರು ಹನ್ಮಕೊಂಡ ಜಿಲ್ಲೆಯವರು ಎಂದು ಗುರುತಿಸಲಾಗಿದೆ.

ಕಮಲಾಪುರದ ಅರವಿಂದ್, ರಾಮು, ಕಲ್ಯಾಣ್ ಮತ್ತು ವಾರಂಗಲ್ ಮೂಲದ ಶಿವ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿವಾಹ ಪೂರ್ವ ಚಿತ್ರೀಕರಣಕ್ಕಾಗಿ ಮೋತೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!