ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಟ್ರಕ್ ಬಿದ್ದಿದೆ.
ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ರಾಜ್‌ಗಢ್ ಜಿಲ್ಲೆಯ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದರು. ದಟ್ಟ ಮಂಜು ಕವಿದಿದ್ದ ಕಾರಣ ಗೋಚರತೆ ಕಡಿಮೆ ಇತ್ತು ಎನ್ನಲಾಗಿದೆ.
ಸ್ಕ್ರಾಪ್ ತುಂಬಿದ್ದ ಟ್ರಕ್ ಕಾರನ್ನು ಹಿಂದಿಕ್ಕಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 40 ಟನ್‌ಗೂ ಹೆಚ್ಚು ಸ್ಕ್ರಾಪ್ ಲಾರಿಯಲ್ಲಿದ್ದ ಕಾರಣ ಜೆಸಿಬಿ ಬಳಸಿ ಅದನ್ನು ಎತ್ತಲಾಗಿದೆ.