ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಟ್ಟೆ ಒಗೆಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ನಡೆದಿದೆ. ಜಿತೇಂದ್ರ ವಿಲಾಸ್ ಲೋಕ್ರೆ (36), ರುಕ್ದಿ ಗ್ರಾಮದ ಸವಿತಾ ಅಮರ್ ಕಾಂಬಳೆ (27), ಬೆಳಗಾವಿಯ ಅಥಣಿಯ ರೇಷ್ಮಾ ದಿಲೀಪ್ (34) ಮತ್ತು ಯಶ್ ದಿಲೀಪ್ (17) ಮೃತಪಟ್ಟವರು.
ಜಿತೇಂದ್ರ ವಿಲಾಸ್ ಲೋಕ್ರೆ, ಸವಿತಾ ಅಮರ್ ಕಾಂಬಳೆ ಮತ್ತು ರೇಷ್ಮಾ ದಿಲೀಪ್ ಅವರ ಮೃತದೇಹಗಳು ಪತ್ತೆಯಾಗಿದ್ದು, ಯಶ್ ದಿಲೀಪ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.
ಬೆಳಿಗ್ಗೆ ಪಕ್ಕದ ಗ್ರಾಮ ಬಸ್ತೆವಾಡದಲ್ಲಿನ ವೇದಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾರೆ. ಈ ವೇಳೆ ಇಬ್ಬರು ಕಾಲು ಜಾರಿ ನದಿಯಲ್ಲಿ ಬಿದ್ದಿದ್ದಾರೆ. ಇವರನ್ನು ಕಾಪಾಡಲು ಇನ್ನಿಬ್ಬರು ನದಿಗೆ ಇಳಿದಿದ್ದಾರೆ. ಈ ವೇಳೆ ನಾಲ್ವರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕಾಗಲ್ ಪುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.