ರಾಜಸ್ಥಾನದಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಟ್ರಕ್‌ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿ ಇಬ್ಬರು ಗಾಯಗೊಂಡ ದಾರುಣ ಘಟನೆ ರಾಜಸ್ಥಾನದಲ್ಲಿ ಶನಿವಾರ ನಡೆದಿದೆ.
ಗುಡಮಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಧಾರಿ-ಸಂಕೋರ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರೆಲ್ಲರೂ ಗುಜರಾತ್ ನಿವಾಸಿಗಳು ಜೈಸಲ್ಮೇರ್‌ನ ರಾಮದೇವರ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!