ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ನಾಲ್ವರಿಗೆ ಸ್ಥಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲು ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಮೋದಿ ಅವರೊಂದಿಗೆ ಸಚಿವರಾಗಿ ಯಾರೆಲ್ಲ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಕರ್ನಾಟಕದಿಂದ ಹೆಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ , ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.

ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿ ಅವರು ತಮ್ಮ ನಿವಾಸದಲ್ಲಿ ಬೆಳಗ್ಗೆ 11:30ಕ್ಕೆ ನೂತನ ಕ್ಯಾಬಿನೆಟ್‌ ಸಚಿವರಿಗೆ ಚಹಾ ಕೂಟವನ್ನು ಆಯೋಜಿಸಿದ್ದರು.ಈ ಸಂದರ್ಭ ಮೋದಿ ಅವರು ತನ್ನ ಎಲ್ಲಾ ಕ್ಯಾಬಿನೆಟ್‌ ಸಚಿವರಿಗೆ ಸಲಹೆ, ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!