ಪಾಳು ಬಿದ್ದಿದ್ದ ಕಟ್ಟಡ ಕುಸಿತ: ಬೀದಿಬದಿ ವ್ಯಾಪಾರ ಮಾಡ್ತಿದ್ದ ನಾಲ್ವರು ಸಾವು

ಹೊಸದಿಗಂತ ಹಾಸನ:

ಬೇಲೂರು ಪಟ್ಟಣದಲ್ಲಿ ಪಾಳುಬಿದ್ದ ಕಟ್ಟಡವೊಂದು ದಿಢೀರ್ ಕುಸಿದು ದೊಡ್ಡ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ,

ಗಾಯಾಳುಗಳನ್ನು ಹಾಸನದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಮಾಹಿತಿಯಂತೆ, ಪಾಳುಬಿದ್ದ ಈ ಕಟ್ಟಡದ ಕೆಳಗೆ ಬೀದಿ ಬದಿ ವ್ಯಾಪಾರಿಗಳು ತಮ್ಮ ವ್ಯಾಪಾರ ಮಾಡುತ್ತಿದ್ದರು. ದಿಢೀರ್ ಎಂದು ಈ ಕಟ್ಟಡ ಕುಸಿದು ಬಿದ್ದಿದೆ. ನಾಲ್ವರು ಮಹಿಳೆಯರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದರು. ಅದರಲ್ಲೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಲವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ತಕ್ಷಣವೇ ಪೊಲೀಸರಿಗೂ ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!