ಸ್ನಾನ ಮಾಡಲು ನದಿಗೆ ತೆರಳಿದ್ದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸ್ನಾನ ಮಾಡಲು ನದಿಗೆ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರಂತ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಗೌತಮಿ-ಗೋದಾವರಿ ನದಿಯಲ್ಲಿ ನಡೆದಿದೆ.

ಶನಿವಾರ ಸಂಜೆ ಸುಮಾರಿಗೆ ತಲ್ಲರೇವು ಮಂಡಲದ ಪಿಳ್ಳಂಕ ಗ್ರಾಮದಲ್ಲಿ 7 ವಿದ್ಯಾರ್ಥಿಗಳು ಈಜಲು ಗೋದಾವರಿ ನದಿಗೆ ಇಳಿದಿದ್ದಾರೆ. ಈ ಪೈಕಿ ನಾಲ್ವರು ನೀರಿನಲ್ಲಿ ಮುಳುಗಿದ್ದಾರೆ. ನಿರಂತರ ಕಾರ್ಯಾಚರಣೆಯಿಂದಾಗಿ ಭಾನುವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಉಳಿದ ಮೂವರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಪಿಯು ವಿದ್ಯಾರ್ಥಿಗಳಾಗಿದ್ದು, ಪಶ್ಚಿಮ ಗೋದಾವರಿ ಜಿಲ್ಲೆಯ ತನುಕು ಪಟ್ಟಣಕ್ಕೆ ಸೇರಿದವರಾಗಿದ್ದಾರೆ ಎಂದು ವರದಿಯಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!