ಗುಜರಾತ್ ನಲ್ಲಿ ಮಹಿಳೆ ಸಹಿತ ನಾಲ್ವರು ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಜರಾತ್‍ನ (Gujarat) ಪೋರಬಂದರ್‌ನಲ್ಲಿ ಮಹಿಳೆ ಸೇರಿ ನಾಲ್ವರು ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರರನ್ನು (Islamic State) ಭಯೋತ್ಪಾದನಾ ನಿಗ್ರಹ ದಳ (ATS) (Porbandar) ಬಂಧಿಸಿದೆ.

ಬಂಧಿತ ನಾಲ್ವರು ಆರೋಪಿಗಳು ಐಎಸ್ ಉಗ್ರಗಾಮಿ ಘಟಕದ ಭಾಗವಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪರಸ್ಪರ ಸಂಪರ್ಕದಲ್ಲಿದ್ದಾರೆ. ಅಲ್ಲದೇ ದೇಶ ತೊರೆದು ಐಎಸ್ ಸೇರಲು ಯೋಜನೆ ರೂಪಿಸಿದ್ದರು.

ಖಚಿತ ಮಾಹಿತಿ ಮೇರೆಗೆ ಡಿಐಜಿ ದೀಪನ್ ಭದ್ರನ್ ಮತ್ತು ಎಸ್ಪಿ ಸುನೀಲ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಿ ಸುಮೇರಾ ಎಂಬ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ವೇಳೆ ಸ್ಫೋಟಕ ವಸ್ತುಗಳು ಹಾಗೂ ಐಎಸ್ ಉಗ್ರರ ಬರಹಗಳು ಸಿಕ್ಕಿವೆ. ಆರೋಪಿಗಳು ಪಾಕಿಸ್ತಾನದ (Pakistan) ಗಡಿಯುದ್ದಕ್ಕೂ ಯುವಕರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಸಜ್ಜುಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!