ಹೊಸದಿಗಂತ ಡಿಜಿಟಲ್ ಡೆಸ್ಕ್:
ಭದ್ರತಾ ಕಾರಣಗಳಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಏಕೈಕ ಅಭ್ಯಾಸವನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. ನಾಲ್ವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಅಭ್ಯಾಸ ರದ್ದಾಗಿದೆ. ಇನ್ನು ವಿರಾಟ್ ಕೊಹ್ಲಿಗೂ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ.
ಇಂದು ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆಯಲಿರುವ ಎಲಿಮಿನೇಟರ್ ಪಂದ್ಯಕ್ಕೆ ಮಂಗಳವಾರ ಆರ್‌ಸಿಬಿ ಅಹಮಾದಾಬಾದ್‌ನಲ್ಲಿರುವ ಗುಜರಾತ್ ಕಾಲೇಜ್ ಅಂಗಳದಲ್ಲಿ ಅಭ್ಯಾಸ ನಡೆಸಬೇಕಿತ್ತು. ಆದರೆ ಯಾವುದೇ ಅಧಿಕೃತ ಕಾರಣ ನೀಡದೇ ಅಭ್ಯಾಸವನ್ನು ರದ್ದುಗೊಳಿಸಿತ್ತು. ಇನ್ನೊಂದು ಕಡೆ ರಾಜಸ್ಥಾನ್ ರಾಯಲ್ಸ್ ಅದೇ ಸ್ಥಳದಲ್ಲಿ ಅಭ್ಯಾಸ ನಡೆಸಿದೆ.