ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿaತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ ಮಂಡ್ಯ:
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ನಾಲ್ಕರಿಂದ ಐದು ಶಾಸಕರು ಬಿಜೆಪಿಯಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಸುಮರವಿ ಕಲ್ಯಾಣ ಮಂಟಪದಲ್ಲಿ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗುತ್ತಿದ್ದುಘಿ, ಇದಕ್ಕೆ ಕಾರ್ಯಕರ್ತರ ಪರಿಶ್ರಮವೇ ಕಾರಣವಾಗಿದೆ ಎಂದರು.
ಪ್ರಧಾನಿ ನರೇಂದ್ರಮೋದಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಘಿ, ಗೃಹ ಸಚಿವ ಅಮಿತ್ಷಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಪರಿಶ್ರಮದಿಂದಾಗಿ ನಾನು ಬಿಜೆಪಿ ಶಾಸಕನಾಗಿ ಆಯ್ಕೆಯಾಗಿ ಸಚಿವನಾಗಿದ್ದೇನೆ. ಪಕ್ಷವನ್ನು ಜಿಲ್ಲೆಯಲ್ಲಿ ಮತ್ತಷ್ಟು ಸದೃಢವಾಗಿ ಕಟ್ಟಿಬೆಳೆಸಲು ಕಾರ್ಯಕರ್ತರೊಂದಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದ