SHOCKING | ಉತ್ತರಾಖಂಡದಲ್ಲಿ ಕರ್ನಾಟಕ ಮೂಲದ ನಾಲ್ವರು ಚಾರಣಿಗರು ಸಾವು
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ, ಇಬ್ಬರನ್ನು ರಕ್ಷಣೆ ಮಾಡಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರಾಖಂಡದ ಸಹಸ್ರತಾಲ್ನಲ್ಲಿ ಸಿಕ್ಕಿಬಿದ್ದಿರುವ ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 19 ಚಾರಣಿಗರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಗರ್ವಾಲ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ದುರಂತದಲ್ಲಿ ಸಾವಿಗೀಡಾದವರ ಗುರುತು ಪತ್ತೆಯಾಗಿಲ್ಲ, ನಾಲ್ವರು ಬೆಂಗಳೂರು ಮೂಲದವರು ಎಂದು ಹೇಳಲಾಗಿದೆ.