ಅಯೋಧ್ಯೆ ರಾಮಮಂದಿರ ನಿರ್ಮಾಣ ಪ್ರದೇಶದಲ್ಲಿ ನೃತ್ಯ: ಮಹಿಳಾ ಪೇದೆಗಳ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಯೋಧ್ಯೆಯ ರಾಮಮಂದಿರ ನಿರ್ಮಾಣ ಪ್ರದೇಶದಲ್ಲಿ ನೃತ್ಯ ಮಾಡಿದ ನಾಲ್ವರು ಮಹಿಳಾ ಪೇದೆಗಳನ್ನು ಅಮಾನತು ಮಾಡಲಾಗಿದೆ.  ಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ನಾಲ್ವರು ಮಹಿಳಾ ಕಾನ್‌ಸ್ಟೆಬಲ್‌ಗಳು ಭೋಜ್‌ಪುರ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದರಿಂದಾಗಿ ಶುಕ್ರವಾರ ನಾಲ್ವರು ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಹೆಚ್ಚುವರಿ ಎಸ್ಪಿ ಪಂಕಜ್ ಪಾಂಡೆ ಸಲ್ಲಿಸಿದ ತನಿಖಾ ವರದಿಯ ಆಧಾರದ ಮೇಲೆ ಕಾನ್‌ಸ್ಟೆಬಲ್‌ಗಳಾದ ಕವಿತಾ ಪಟೇಲ್, ಕಾಮಿನಿ ಕುಶ್ವಾಹ, ಕಾಶಿಶ್ ಸಾವ್ನಿ ಮತ್ತು ಸಂಧ್ಯಾ ಸಿಂಗ್ ಅವರನ್ನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮುನಿರಾಜ್ ಅಮಾನತುಗೊಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!