ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು: ಇಬ್ಬರ ಮೃತದೇಹ ಪತ್ತೆ

ಹೊಸದಿಗಂತ ವರದಿ ಕೊಪ್ಪಳ:
ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹಳ್ಳಗಳು ತುಂಬಿ ಹರಿಯುತ್ತಿದ್ದು, ಹಳ್ಳ ದಾಟುವಾಗ ನಾಲ್ವರು ಮಹಿಳೆಯರು ಕೊಚ್ಚಿಕೊಂಡು ಹೋದ ಘಟನೆ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ.
ಹತ್ತಿ ಜೀನ್ ನಿಂದ ಕೆಲಸವನ್ನು ಮುಗಿಸಿಕೊಂಡು ಶನಿವಾರ ರಾತ್ರಿ ಮರಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಳ್ಳವನ್ನು ದಾಟುವ ಸಮಯದಲ್ಲಿ ಅವಘಡ ಸಂಭವಿಸಿದೆ.
ಭುವನೇಶ್ವರಿ(32), ಗಿರೀಜಾ, ರೇಖಾ (40), ವೀಣಾ (22) ಎಂಬುವವರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿ ಇಬ್ಬರ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!