ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಹೋದ 4 ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ನಾಗಪಡ ಪ್ರದೇಶದ ಡಿಮ್ಟಿಮ್ಕರ್ ರಸ್ತೆಯಲ್ಲಿರುವ ಬಿಸ್ಮಿಲ್ಲಾ ಸ್ಪೇಸ್ ಕಟ್ಟಡದಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೃಹನ್ಮುಂಬೈ ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಪೊಲೀಸರ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.