ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ಕ್ಯೂಟ್ ಕಪಲ್‌ಗಳಲ್ಲಿ ಒಂದಾದ ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ (Chandan Shetty) ಮತ್ತು ನಟಿ ನಿವೇದಿತಾ ಗೌಡ (Niveditha Gowda) ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದ್ದು, ವಿಚ್ಛೇದನ ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ.
ಈ ಮೂಲಕ ರ್‍ಯಾಪರ್ ಚಂದನ್ ಶೆಟ್ಟಿ- ನಿವೇದಿತಾ ಗೌಡ ಅವರ ನಾಲ್ಕು ವರ್ಷದ ದಾಂಪತ್ಯ ಅಂತ್ಯವಾಗಿದೆ.
ಕೆಲ ಕಾರಣಾಂತರಗಳಿಂದ ಕೂಡಿ ಇರಲು ಇಚ್ಚಿಸಿದ ಈ ಜೋಡಿ, ಪ್ರತ್ಯೇಕವಾಗಿರಲು ಬಯಸಿದೆ. ಹೀಗಾಗಿ ವಿಚ್ಛೇದನ ಕೋರಿ ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿತ್ತು. ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್, ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.