ಸ್ವಿಮ್ಮಿಂಗ್‌ ಪೂಲ್‌ಗೆ ಬಿದ್ದು ನಾಲ್ಕನೇ ಕ್ಲಾಸ್‌ ವಿದ್ಯಾರ್ಥಿ ಸಾವು, ರೆಸಾರ್ಟ್‌ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಬಿದ್ದು ನಾಲ್ಕನೇ ತರಗತಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ವಿದ್ಯಾರ್ಥಿ. ವಿದ್ಯಾರ್ಥಿ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದನು. ಆದರೆ ರೆಸಾರ್ಟ್​ನ ಸ್ವಿಮ್ಮಿಂಗ್​ ಪೂಲ್​ನ ನೀರಿನಲ್ಲಿ ಬಿದ್ದು ಅಸ್ವಸ್ಥನಾಗಿದ್ದನು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅರೀಝ್ ಮೃತಪಟ್ಟಿದ್ದಾನೆ.

ಸದ್ಯ ಈ ಸಂಬಂಧ ಬಾಲಕನ ಪೋಷಕರು ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!