ಫೆ. 27, 28 ರಂದು ಕಾಂಗ್ರೆಸ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ದಿಗಂತ ವರದಿ ಹುಬ್ಬಳ್ಳಿ:

ಸದನದಲ್ಲಿ ಜನಸಾಮಾನ್ಯರ ಅಭಿವೃದ್ಧಿ ಕಾರ್ಯ ಮಾಡಲು ಸಲಹೆ ಸೂಚನೆ ನೀಡಬೇಕಾದ‌ ವಿರೋಧ ಪಕ್ಷ ಇಲ್ಲಸಲ್ಲದ ಕಾರಣಗಳಿಂದ ಕಲಾಪ ಹಾಳು ಮಾಡುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿ ವತಿಯಿಂದ ರಾಜದ್ಯಾಂತ ಫೆ. 27 ಮತ್ತು 28  ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷವಾದ ಕಾಂಗ್ರೆಸ್ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಕ್ಷುಲಕ ಕಾರಣಕ್ಕೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಿ ಜನರ ಹಾದಿ ತಪ್ಪಿಸುತ್ತಿದೆ.
ನಗರದ ನಕ್ಸಲ್, ಭಯೋತ್ಪಾದಕರ, ಉಗ್ರವಾದಿಗಳ ಪರವಿರುವ ಕಾಂಗ್ರೆಸ್ ನಡೆ ಖಂಡಿಸಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದರು.
ಎಸ್.ಡಿ.ಪಿ.ಐ. ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸವಂತೆ ಸಿಎಂ ಅವರಿಗೆ ಈಗಾಗಲೇ ಒತ್ತಾಯಿಸಿದ್ದೇವೆ. ಸದ್ಯದಲ್ಲೇ ಸಿಎಂ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ವಿಪ ಸದಸ್ಯ ಪ್ರದೀಪ ಶೆಟ್ಟರ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ, ಜಿಲ್ಲಾಧ್ಯಕ್ಷ ಸಂಜಯ ಕಪಟ್ಕರ್ ಮತ್ತು ರವಿ ನಾಯಕ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!