ದಿಗಂತ ವರದಿ ಹುಬ್ಬಳ್ಳಿ:
ಕೇಂದ್ರ ಹೆದ್ದಾರಿ ಪ್ರಾಧಿಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆಯ ಸಮಾರಂಭಕ್ಕೆ ಫೆ. 28 ಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಗರದ ಗಬ್ಬೂರ ಬೈಪಾಸ್ ಬಳಿ ಸಕಲ ಸಿದ್ಧತೆಗಳು ನಡೆದಿವೆ. ಅಂದು ಈ ಸಮಾರಂಭಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಜಗದೀಶ ಶೆಟ್ಟರ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಹಾಲಪ್ಪ ಆಚಾರ್ಯ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದರು.