ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕಪ್‌ನ ಬಾಂಗ್ಲಾದೇಶ ವಿರುದ್ದದ ಪಂದ್ಯದ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮತ್ತೆ ಗಾಯಗೊಂಡಿದ್ದಾರೆ.
ಬಾಂಗ್ಲಾದೇಶ ವಿರುದ್ದ ರನ್‌ಗಾಗಿ ಓಡುವ ವೇಳೆ ಫೀಲ್ಡರ್ ಎಸೆದ ಚೆಂಡು ಕೇನ್ ಕೈಬೆರಳಿಗೆ ಬಡಿಯಿತು. ಸ್ಕ್ಯಾನ್ ವೇಳೆ ಅವರ ಎಡಗೈ ಹೆಬ್ಬೆರಳು ಮುರಿತಕ್ಕೊಳಗಾಗಿರುವುದು ಕಂಡುಬಂದಿದ್ದು, ಹೀಗಾಗಿ ಕನಿಷ್ಠ 2 ವಾರ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ.
ಭಾರತ ವಿರುದ್ದ ಅ.22ರ ಪಂದ್ಯಕ್ಕೂ ಅವರು ಅಲಭ್ಯರಾಗಲಿದ್ದಾರೆ. ಹೀಗಾಗಿ ಟಾಮ್ ಬ್ಲಂಡೆಲ್‌ಗೆ ತಂಡ ಸೇರಿಕೊಳ್ಳುವಂತೆ ಸೂಚಿಸಲಾಗಿದೆ. ಕೇನ್ ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಗೈರಾಗಿದ್ದರು.
ಕಳೆದೆರಡು ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ನ್ಯೂಜಿಲೆಂಡ್ ತಂಡವು ಈ ಬಾರಿ ಶತಾಯಗತಾಯ ಕಪ್ ಗೆಲ್ಲಲೇಬೇಕಾದ ಛಲದಿಂದ ಕಣಕ್ಕಿಳಿದಿದೆ. ಸದ್ಯ ಈ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೂರು ಪಂದ್ಯಗಳನ್ನಾಡಿರುವ ಕಿವೀಸ್ ತಂಡವು ಮೂರು ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದೆ.