ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಡೋ ಚಂಡಮಾರುತವು ಫ್ರಾನ್ಸ್ ದೊಡ್ಡ ಅನಾಹುತವನ್ನೇ ಸೃಷ್ಟಿ ಮಾಡಿದೆ. ಈಗಾಗಲೇ ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಸಂಖ್ಯೆ ಇನ್ನೂ ಹೆಚ್ಚಾಗುವ ಭೀತಿ ಇದೆ.
ಆಫ್ರಿಕಾದ ಕರಾವಳಿಯ ಆಗ್ನೇಯ ಹಿಂದೂ ಮಹಾಸಾಗರದಲ್ಲಿರುವ ಮಾಯೋಟ್ ಫ್ರಾನ್ಸ್ ಮತ್ತು ಯುರೋಪಿಯನ್ ಒಕ್ಕೂಟದ ಬಡ ಪ್ರದೇಶವಾಗಿದ್ದು, ಇಲ್ಲಿ ಜನಜೀವನ ನಲುಗಿಹೋಗಿದೆ. ಚಿಡೋ ಚಂಡಮಾರುತ ಇದೀಗ ಆಫ್ರಿಕಾದ ಪೂರ್ವ ಕರಾವಳಿಯನ್ನು ತಲುಪಿದೆ. ಕೊಳೆಗೇರಿಗಳಲ್ಲಿ ವಾಸಿಸುವ ಅನೇಕ ಜನರು ಗಂಭೀರ ಅಪಾಯಗಳನ್ನು ಎದುರಿಸುತ್ತಿದ್ದಾರೆ ಎನ್ನಲಾಗಿದೆ.
ಚಿಡೋ ಗಂಟೆಗೆ 220 ಕಿಲೋಮೀಟರ್‌ಗಿಂತಲೂ ಹೆಚ್ಚು ಗಾಳಿಯ ರಭಸವನ್ನು ಉಂಟು ಮಾಡಿತ್ತು. ಇದರಿಂದ ಹಲವಾರು ಮನೆಗಳು ಹಾನಿಗೊಳಗಾಗಿವೆ.
ಇದು ಆಫ್ರಿಕಾದ ಪೂರ್ವ ಕರಾವಳಿಯಿಂದ ಸುಮಾರು 800 ಕಿಲೋಮೀಟರ್ ದೂರದಲ್ಲಿರುವ ಎರಡು ಪ್ರಮುಖ ದ್ವೀಪಗಳಲ್ಲಿ ಹರಡಿದೆ. ಹಲವು ಮರಗಳು ಧರೆಗುರುಳಿದ್ದು, ದೋಣಿಗಳು ಉರುಳಿ ಬಿದ್ದಿವೆ ಅಥವಾ ಮುಳುಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.