ಹೊಸದಿಗಂತ ಡಿಜಿಟಲ್ ಡೆಸ್ಕ್:
ಫ್ರಾನ್ಸ್‌ನಲ್ಲಿ ಟ್ರಾಫಿಕ್ ತಪಾಸಣೆ ವೇಳೆ 17 ವರ್ಷದ ಯುವಕನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದು, ಪೊಲೀಸರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.
ಸಿಕ್ಕಸಿಕ್ಕ ಕಟ್ಟಡಗಳಿಗೆ, ಪೊಲೀಸ್ ವಾಹನಗಳಿಗೆ ಜನರು ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯನ್ನು ಕೊಂದ ಪೊಲೀಸ್ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ಕೊಲೆ ಆಪಾದನೆ ಹೊರಿಸಿ, ನ್ಯಾಯಾಧೀಶರು ತನಿಖೆ ನಡೆಸಲಿದ್ದಾರೆ ಎಂದು ಫ್ರಾನ್ಸ್ ಪ್ರಾಸಿಕ್ಯೂಟರ್ ಮಾಹಿತಿ ನೀಡಿದ್ದಾರೆ.
ಈಗಾಗಲೇ ಇಬ್ಬರು ಪೊಲೀಸರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಇತ್ತ ಫ್ರಾನ್ಸ್‌ನಲ್ಲಿ ಪ್ರತಿಭಟನೆ ಉಗ್ರರೂಪ ಪಡೆದಿದ್ದು, ಇಡೀ ಫ್ರಾನ್ಸ್ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ಸಂಬಂಧ ದೇಶಾದ್ಯಂತ ಈವರೆಗೂ 400 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲಿನ ಪರಿಸ್ಥಿತಿ ಹೇಗಿದೆ ಈ ವಿಡಿಯೋ ನೋಡಿ…
https://twitter.com/AmyMek/status/1674666367512084480?s=20