ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರ ಹೆಸರನ್ನು ಬಳಸಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ಇಬ್ಬರು ಮಹಿಳೆಯ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಅಮೆರಿಕದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರು ಆಗಮಿಸಲಿದ್ದಾರೆ ಎಂದು ಹೇಳಿ ಅವರ ಫೋಟೋ ಬಳಸಿ ವಂಚನೆ ಮಾಡಿದ ಹಿನ್ನೆಲೆಯಲ್ಲಿ ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ಸುಧಾಮೂರ್ತಿ ಅವರ ಪರ್ಸನಲ್ ಅಸಿಸ್ಟೆಂಟ್ ಮಮತ ಸಂಜಯ್ ಅವರು ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.